ಕೆರೆಗಳ ಅಭಿವೃದ್ಧಿಗಾಗಿ ಹಣ ಖರ್ಚು ಮಾಡೋಕೆ ರೆಡಿ : ಡಿಸಿಎಂ ಡಾ.ಜಿ.ಪರಮೇಶ್ವರ್​

ಬೆಂಗಳೂರು: ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಇಂದು ಕಗ್ಗದಾಸಪುರ ಮತ್ತು ಬೆಳ್ಳಂದೂರು ಕೆರೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜನ ಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಬೆಳ್ಳಂದೂರು ಕೆರೆ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಬೆಂಗಳೂರಿನಲ್ಲಿ 350ಕ್ಕೂ ಹೆಚ್ಚು ಕೆರೆಗಳಿವೆ. ಎಲ್ಲಾ ಕೆರೆಗಳೂ ಕಲುಷಿತವಾಗಿವೆ. ಕಲುಷಿತ ನೀರನ್ನು ಕೆರೆಗೆ ಬಿಡೋದ್ರಿಂದ ಸಮಸ್ಯೆ ಸೃಷ್ಠಿಯಾಗಿದೆ ಎಂದು ಹೇಳಿದರು. ಇನ್ನು ಕಲುಷಿತ ನೀರನ್ನು ನಿಲ್ಲಿಸೋ ಪ್ರಯತ್ನ ನಡೆಯುತ್ತಿದೆ. ಮೂರು ತಿಂಗಳ ಒಳಗೆ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲಿದ್ದೇವೆ. ಕಗ್ಗದಾಸಪುರ ಕೆರೆಯಲ್ಲಿ ಎಸ್​ಟಿಪಿ(ಸಿವೇಜ್​ ಟ್ರೀಟ್​ಮೆಂಟ್​ ಪ್ಲಾಂಟ್​) ನಿರ್ಮಾಣಕ್ಕೆ ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕೆರೆಗಳ ಅಭಿವೃದ್ಧಿಗಾಗಿ ಸರ್ಕಾರ ಹಣ ಖರ್ಚು ಮಾಡೋಕೆ ರೆಡಿ ಇದೆ ಎಂದು ಭರವಸೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv