ತಮಿಳುನಾಡಿಗೆ ಭಾನುವಾರದಿಂದಲೇ ಹರಿಯುತ್ತಿದೆ ಕಾವೇರಿ

ಬೆಂಗಳೂರು: ತಮಿಳುನಾಡಿಗೆ ಕಳೆದ ಭಾನುವಾರದಿಂದಲೇ ಕಾವೇರಿ ನೀರು ಹರಿಯುತ್ತಿದೆ. ಸರ್ಕಾರದ ಆದೇಶದ ಮೇರೆಗೆ ಅಧಿಕಾರಿಗಳು ತಮಿಳುನಾಡಿನ ಅಣೆಕಟ್ಟುಗಳಿಗೆ ಕಾವೇರಿ ನೀರು ಹರಿಸುತ್ತಿದ್ದಾರೆ. ಜುಲೈ 8, ಭಾನುವಾರ ರಾತ್ರಿಯಿಂದಲೇ ನೀರು ಬಿಡುಗಡೆ ಮಾಡುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇನ್ನು ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ನೀಡಲು ನೀರಾವರಿ ಇಲಾಖೆಯ ಅಧಿಕಾರಿಗಳು ನಿರಾಕರಿಸಿದ್ದಾರೆ. ನೀರು ಬಿಟ್ಟ ಹಿನ್ನೆಲೆ ರೈತರ ಹೋರಾಟ ಮಾಡ್ತಾರೆ ಅಂತಾ ಅಧಿಕಾರಿಗಳು ಭಯದಲ್ಲಿದ್ದಾರೆ ಎನ್ನಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv