ಗಾಂಜಾ ಸಾಗಿಸ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ಅರೆಸ್ಟ್

ಕೋಲಾರ: ಗಾಂಜಾ ಸಾಗಾಟ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯನ್ನು ಗಲ್​ಪೇಟೆ ಪೊಲೀಸರು ಕೋಲಾರದ ಹೊರವಲಯದ ಟಮಕಾ ಬಳಿ ಬಂಧಿಸಿದ್ದಾರೆ. ಗಾಂಜಾ ಸಾಗಾಟ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಸುನೀಲ್​ ಎಂದು ಹೇಳಲಾಗಿದೆ. ಈತ ಆಂಧ್ರಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕೇರಳದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ವೇಳೆ 8 ಕೆ.ಜಿ. ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಗಲ್​ಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv