ಬಾಲಕಿ ಕಿಡ್ನ್ಯಾಪ್​ ಹಾಗೂ ಅತ್ಯಾಚಾರ ಪ್ರಕರಣ: ಯುವಕನ ಬಂಧನ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಕಿಡ್ನ್ಯಾಪ್ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಶಂಕರ್ ಮಾಳಗಿ (18) ಬಂಧಿತ ಯುವಕ. ಕಳೆದ ಕೆಲ ದಿನಗಳ ಹಿಂದೆ ಅದೇ ಗ್ರಾಮದಲ್ಲೊಇ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿ ಬಾಲಕಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ. ಈ ಸಂಬಂಧ ಬಾಲಕಿ ಪೋಷಕರು ಹುಕ್ಕೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇನ್ನು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನೆಡೆಸಿದ ಪೊಲೀಸರು ಆರೋಪಿಯನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾವಳದ ಗ್ರಾಮದಲ್ಲಿ ಬಂಧಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv