ಯುವ ಮತದಾರರೆ ದೇಶದ ಭವಿಷ್ಯ ನಿಮ್ಮ ಕೈಯಲ್ಲಿದೆ, ತಪ್ಪದೇ ಮತ ಚಲಾಯಿಸಿ: ಪ್ರಮೋದಾದೇವಿ

ಮೈಸೂರು: ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ನಗರದ ಶ್ರೀಕಾಂತ ಸಂಸ್ಕೃತ ಪಾಠ ಶಾಲೆಯಲ್ಲಿ ಮತ ಚಲಾವಣೆ ಮಾಡಿದರು. ಮತದಾನ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪ್ರಮೋದಾದೇವಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತ ಚಲಾಯಿಸಿದ್ದೇನೆ. ಎಲ್ಲರೂ ಮತದಾನ ಮಾಡಬೇಕು. ಮೊದಲ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿಗೆ ಶುಭಾಶಯಗಳು. ದೇಶದ ಭವಿಷ್ಯ ನಿಮ್ಮ ಕೈಯಲ್ಲಿದೆ, ತಪ್ಪದೇ ಮತ ಚಲಾಯಿಸಿ. ಜನರು ಜಾಗೃತರಾಗಬೇಕು, ಕಡ್ಡಾಯವಾಗಿ ಎಲ್ಲರೂ ಮತ ಹಾಕಬೇಕು ಎಂದು ಹೇಳಿದರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv