ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ ಮತದಾನ

ಕೊಡಗು: ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕೊಡಗಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಇಂದು ಬೆಳಿಗ್ಗೆಯಿಂದ ಮಳೆ ಕಡಿಮೆಯಾಗಿರುವುದರಿಂದ ಮತದಾರರು ಮತಗಟ್ಟೆಗೆ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಪದವೀಧರ 1460ರಿದ್ದು, ಶಿಕ್ಷಕರ ಕ್ಷೇತ್ರಕ್ಕೆ 1240 ಮತದಾರರಿದ್ದಾರೆ. ಕುಶಾಲನಗರದಲ್ಲಿ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ ಮತದಾನ ಮಾಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv