ಸಮಯಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿಸಿದ ಚಾಲಕ

ಕೊಡಗು: ಬಸ್​ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಈ ಘಟನೆ ಮಡಿಕೇರಿ ತಾಲೂಕಿನ ಕೋಯನಾಡು ಬಳಿ ಸಂಭವಿಸಿದೆ. ಸುಬ್ರಮಣ್ಯದಿಂದ ಮಡಿಕೇರಿ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ ಸರ್ಕಾರಿ ಬಸ್​ಗೆ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಹೊರಟಿದ್ದ ಟ್ಯಾಂಕರ್ ಇನ್ನೇನು ಡಿಕ್ಕಿ ಹೊಡಿಬೇಕು ಅನ್ನುವಷ್ಟರಲ್ಲಿ ಬಸ್​​​ ಚಾಲಕ ಸಮಯ ಪ್ರಜ್ಞೆ ಮರೆದಿದ್ದಾನೆ. ಟ್ಯಾಂಕರ್ ಚಾಲಕನ ಅಜಾಗರೂಕತೆಯಿಂದಾಗಿ ಬಸ್​​ಗೆ ಟ್ಯಾಂಕರ್​ ಡಿಕ್ಕಿ ಹೊಡಿಯುತ್ತಿತ್ತು. ಆದರೆ ಬಸ್​​ ಚಾಲಕ ಜಗದೀಶ್ ತಕ್ಷಣ ಸಮಯಪ್ರಜ್ಞೆ ಮೆರೆದು ಟ್ಯಾಂಕರ್​ನಿಂದ ತಪ್ಪಿಸಲು ಹೋಗಿ ಬಸ್ಸನ್ನು ರಸ್ತೆಯ ಪಕ್ಕಕ್ಕೆ ಇಳಿಸಿದ ಪರಿಣಾಮ ಬಸ್​​ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್​ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ಯಾಂಕರ್​ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv