ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ

ಕೊಡಗು: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಮಡಿಕೇರಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿಡಿಪಿಐ ಮಂಜುಳಾ ರಜೆ ಘೋಷಿಸಿದ್ದಾರೆ. ಸೋಮವಾರಪೇಟೆ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೂ ಬಿಇಒ ನಾಗರಾಜಯ್ಯ ರಜೆ ಘೋಷಣೆ ಮಾಡಿದ್ದಾರೆ. ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭಾಗಮಂಡಲ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತವಾಗಿದೆ. ಭಾಗಮಂಡಲ- ನಾಪೋಕ್ಲು ರಸ್ತೆ ಸಂಪರ್ಕ ಕಡಿತ ಗೊಂಡಿದೆ. ಇನ್ನೂ ತಲಕಾವೇರಿ ವ್ಯಾಪ್ತಿಯಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಕಾವೇರಿ ಮೈದುಂಬಿ ಹರಿಯುತ್ತಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv