ಶ್ರೀಲಂಕಾ ಸರಣಿ ಸ್ಫೋಟ: ವಿರಾಟ್​ ಕೊಹ್ಲಿ ಸಂತಾಪ

ಕೋಲಂಬೊ, ಶ್ರೀಲಂಕಾ: ಶ್ರೀಲಂಕಾದಲ್ಲಿ ಇಂದು ಸಂಭವಿಸಿದ ಭೀಕರ ಸರಣಿ ಬಾಂಬ್​ ಸ್ಫೋಟದಲ್ಲಿ ಮಡಿದವರಿಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ. ಈಸ್ಟರ್ ಸಂಡೇ ಪ್ರೇಯರ್ ವೇಳೆ ಮೂರು ಚರ್ಚ್​ ಹಾಗೂ ಮೂರು ಫೈವ್​ ಸ್ಟಾರ್​ ಹೋಟೆಲ್​​ ಸೇರಿದಂತೆ 6ಕ್ಕೂ ಹೆಚ್ಚು ಕಡೆ ಬಾಂಬ್​ ಸ್ಫೋಟಿಸಿದ್ದು 50ಕ್ಕೂ ಹೆಚ್ಚು ಅಮಾಯಕರು ಮೃತಪಟ್ಟಿದ್ದಾರೆ, 500ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರೋ ವಿರಾಟ್ ಕೊಹ್ಲಿ, ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಸ್ಫೋಟದ ಬಗ್ಗೆ ಕೇಳಿ ತೀವ್ರ ಆಘಾತವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

 


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv