ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ದಾವಣಗೆರೆ ‌: ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ. ಶಾಸಕರೇ ಬಂದರೆ ಅವರನ್ನು ಸೇರಿಸಿಕೊಂಡು ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ದಾವಣಗೆರೆಯ ಮಲೆಬೆನ್ನೂರಿನಲ್ಲಿ ಮಾತನಾಡಿರುವ ಅವರು ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ. ಶಾಸಕರೇ ಬಂದರೆ ಅವರನ್ನು ಸೇರಿಸಿಕೊಂಡು ಸರ್ಕಾರ ರಚನೆ ಮಾಡುತ್ತೇವೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ. ಅಧಿಕಾರ ಬೇಡಾ ಅನ್ನುವುದಕ್ಕೆ ನಾವೇನು ಸನ್ಯಾಸಿಗಳಲ್ಲ. ನಮಗೂ ಅಸೆ ಇದೆ. ಶಾಸಕರ ಖರೀದಿ ಆಡಿಯೋ ಕಲ್ಪಿತ. ಹಾಗಾಗಿ ಶ್ರೀರಾಮುಲು ಅವ್ರು ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ವಿಫಲವಾಗಿದೆ. ರೈತರಿಗೆ ಇದುವರೆಗೂ ಋಣ ಪತ್ರ ನೀಡಿಲ್ಲ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

ಇದಕ್ಕೂ ಮುನ್ನ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರನ್ನು ಕೋಟ ಶ್ರೀನಿವಾಸ ಪೂಜಾರಿ ಭೇಟಿಯಾದರು. ಮರಳಿನ ಸಮರ್ಪಕ ಪೂರೈಕೆಗೆ ಆಗ್ರಹಿಸಿ ಹರಿಹರ ತಾಲ್ಲೂಕಿನ ಮಲೆಬೆನ್ನೂರು ಗ್ರಾಮದ ಬಳಿ ಶಾಸಕ ರೇಣುಕಾಚಾರ್ಯ ಸತ್ಯಾಗ್ರಹ ಕೂತಿದ್ದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಈ ವೇಳೆ ಶಾಸಕ ರೇಣುಕಾಚಾರ್ಯ ಜತೆೆಗೆ ಮಾತುಕತೆ ನಡೆಸಿದ್ರು. ಪ್ರತಿಭಟನೆ ಹಿಂಪಡೆಯುವಂತೆ ಶ್ರೀನಿವಾಸ ಪೂಜಾರಿ, ರೇಣುಕಾಚಾರ್ಯ ಅವರಿಗೆ ಕಿವಿಮಾತು ಹೇಳಿದ್ದಾರೆ. ಈ ಬಗ್ಗೆ ಸದನದಲ್ಲಿ ‌ಧ್ವನಿ ಎತ್ತುವಂತೆ ಕೋಟ ಶ್ರೀನಿವಾಸ್ ಪೂಜಾರಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ  contact@firstnews.tv