ದಾವಣಗೆರೆ ಟಿಕೆಟ್ ಗೊಂದಲ: ಮಲ್ಲಿಕಾರ್ಜುನ್​​ಗೂ ಕೆಪಿಸಿಸಿ ಬುಲಾವ್​..!

ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ದಿಢೀರ್ ಬುಲಾವ್ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಅವರು, ನಾನು ಬೆಂಗಳೂರಿಗೆ ಹೋಗುತ್ತಿದ್ದೇನೆ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಎರಡು ಸಭೆ ನಡೆಯಲಿವೆ. ಈ ಸಭೆಗಳಲ್ಲಿ ಅಂತಿಮ ನಿರ್ಧಾರ ಆಗಲಿದೆ. ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲು ಕೊನೆದಿನ. ಅಲ್ಲಿಯ ತನಕ ಕಾದು ನೋಡಿ ಎಂದರು.

ಬಳಿಕ ಗೊಂದಲ ವಿಚಾರವಾಗಿ ಮಾತನಾಡಿರುವ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಮಂಜಪ್ಪ, ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪುತ್ರ ಸ್ಪರ್ಧೆಯಿಂದ ಹಿಂದೆ ಸರಿದು ಆ ಟಿಕೆಟ್ ನನಗೆ ಕೊಡುವಂತೆ ಪಕ್ಷದ ವರಿಷ್ಠರಿಗೆ ಹೇಳಿದ್ದಾರೆ. ಆದ್ರೆ ತೇಜಸ್ವಿ ಪಟೇಲ್ ಹೆಸರು ಹೇಗೆ ಬಂತು ಎಂಬುದು ತಿಳಿಯುತ್ತಿಲ್ಲ. ಕಾಂಗ್ರೆಸ್ ಪಕ್ಷದವರಿಗೇ ಟಿಕೆಟ್ ಕೊಡಬೇಕು. ಬೇರೆಯವರಿಗೆ ಟಿಕೆಟ್ ಕೊಟ್ಟರೇ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv