ಲೋಕ ಸಮರ; ಇಬ್ಬರು ಅಲ್ಪಸಂಖ್ಯಾತರಿಗೆ ಕಾಂಗ್ರೆಸ್​ನಿಂದ ಟಿಕೆಟ್..!

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಬ್ಬರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲು ಕಾಂಗ್ರೆಸ್​ ತೀರ್ಮಾನಿಸಿದೆಯಂತೆ. ಬೆಂಗಳೂರು ಸೆಂಟ್ರಲ್ ಹಾಗೂ ಬೀದರ್ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಸೆಂಟ್ರಲ್ ಹಾಗೂ ಬೀದರ್ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಅಲ್ಪಸಂಖ್ಯಾತ ಮತಗಳು ಇವೆ. ಹಾಗಾಗಿ ಅಲ್ಪಸಂಖ್ಯಾತರನ್ನ ಕಣಕ್ಕೆ ಇಳಿಸಿದರೆ ನಿರಾಯಾಸವಾಗಿ ಗೆಲ್ಲಬಹುದು ಎಂಬುದು ರಾಜ್ಯ ಕಾಂಗ್ರೆಸ್​ ನಾಯಕರ ಲೆಕ್ಕಾಚಾರ. ಈ ಹಿನ್ನೆಲೆಯಲ್ಲಿ ಇಂದು ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ,  ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಈಗಾಗಲೇ ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ರಿಜ್ವಾನ್ ಅರ್ಷದ್, ರೋಷನ್ ಬೇಗ್, ಬಿ.ಕೆ ಹರಿಪ್ರಸಾದ್, ಸಾಂಗ್ಲಿಯಾನ ಹೆಸರುಗಳು ಚಾಲ್ತಿಯಲ್ಲಿವೆ. ಬೀದರ್ ಕ್ಷೇತ್ರದಲ್ಲೂ ಅಲ್ಪಸಂಖ್ಯಾತರಿಗೆ ಟಿಕೆಟ್​ ಪಕ್ಕಾ ಆಗಿದೆ. ಒಂದು ವೇಳೆ, ಜೆಡಿಎಸ್‌ ಏನಾದ್ರೂ ಈ ಎರಡರಲ್ಲಿ ಯಾವ ಕ್ಷೇತ್ರಕ್ಕಾದ್ರು ಪಟ್ಟು ಹಿಡಿದರೆ, ಕಾಂಗ್ರೆಸ್​ ಬೇರೊಂದು ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv