ಹಳ್ಳಕ್ಕೆ ನುಗ್ಗಿದ ಬಸ್‌; ನಾಲ್ವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ನಗರದ ಬಾಗೇಪಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಕೆಎಸ್ಆರ್​ಟಿಸಿ ಬಸ್ಸೊಂದು ಹಳ್ಳಕ್ಕೆ ನುಗ್ಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಫುಟ್‌​ಪಾತ್​ಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದೆ. ಘಟನೆಯಲ್ಲಿ ಚಾಲಕ ಸೇರಿ 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಬಳ್ಳಾಪುರದಿಂದ ಬಾಗೇಪಲ್ಲಿಗೆ ತೆರಳುವ ವೇಳೆ ಘಟನೆ ಸಂಭವಿಸಿದೆ. ಬಸ್‌ನ ಮುಂಭಾಗ ಜಖಂಗೊಂಡಿದ್ದು, ಗಾಜು ಪುಡಿ ಪುಡಿಯಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *