ಕೆಎಸ್ಆರ್​ಟಿಸಿ ಬಸ್ ಡಿಕ್ಕಿ, ಸೈಕಲ್ ಸವಾರನಿಗೆ ಗಂಭೀರ ಗಾಯ

ದಾವಣಗೆರೆ: ಕೆಎಸ್ಆರ್​ಟಿಸಿ ಬಸ್, ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಮಹಾನಗರ ಪಾಲಿಕೆ ಮುಂಭಾಗದಲ್ಲಿ ನಡೆದಿದೆ.
ಬಸ್ ಗುದ್ದಿದ ರಭಸಕ್ಕೆ ಸೈಕಲ್ ಸವಾರನ ಎಡಗಾಲು ಮೂಳೆ ಮುರಿದಿದ್ದು, ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಹಾಗೂ ಅದೇ ಬಸ್ ನಿರ್ವಾಹಕ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದ್ದಾರೆ. ಈ ಕುರಿತಂತೆ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv