‘ದರ ಹೆಚ್ಚಳ ಮಾಡುವಂತೆ ಕೆಎಸ್‌ಆರ್‌ಟಿಸಿಯಿಂದ ಪ್ರಸ್ತಾವನೆ ಬಂದಿದೆ..!’

ಬೆಂಗಳೂರು: ಟಿಕೆಟ್ ದರ ಹೆಚ್ಚಳ ಮಾಡಲು ಕೆಎಸ್‌ಆರ್‌ಟಿಸಿಯಿಂದ ಪ್ರಸ್ತಾವನೆ ಬಂದಿದೆ, ಆದರೆ ಸದ್ಯಕ್ಕೆ‌ ಬಸ್ ದರ ಹೆಚ್ಚಳ ಮಾಡಲ್ಲ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತಮಾಡಿದ ಅವರು, ಬೇರೆ ದೇಶಗಳಲ್ಲಿ ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಶೇಕಡಾ 80ರಷ್ಟು ಅನುದಾನ ಕೊಡುತ್ತಿದೆ. ಈ ಹಿನ್ನೆಲೆಯಲ್ಲಿ ನಮಗೂ ಹೆಚ್ಚಿನ ಅನುದಾನ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದೇವೆ ಎಂದರು. ₹ 100 ಕೋಟಿ ಸರ್ಕಾರ ನೀಡಿದ ಅನುದಾನ ಸಾಕಾಗಲ್ಲ. 1000 ಕೋಟಿ ಅನುದಾನ ನೀಡುವಂತೆ ಬೇಡಿಕೆ ಇಟ್ಟಿದ್ದೇವೆ ಎಂದರು.

ಅಲ್ಲದೇ, ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟಿ, ಸಂಸ್ಥೆಗೆ ಆದಾಯ ಗಳಿಸುವ ಚಿಂತನೆಯನ್ನೂ ಮಾಡಿದ್ದೇವೆ. ವಿದ್ಯುತ್ ಬಿಲ್‌ಗಳ ಹೊರೆ ತಪ್ಪಿಸಲು‌ ಡಿಪೋಗಳ ಕಟ್ಟಡಗಳ ಮೇಲೆ ಸೋಲಾರ್ ಅಳವಡಿಕೆಗೂ ಯೋಜನೆ ಮಾಡಲಾಗಿದೆ. ನನ್ನ ವೈಯಕ್ತಿಕ ಅಭಿಪ್ರಾಯ ಕೇಳಿದ್ರೆ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು. ಆದರೆ, ಈ ವಿಚಾರ ಸರ್ಕಾರಕ್ಕೆ ಬಿಟ್ಟಿದ್ದು, ಈ ಬಗ್ಗೆ ಸರ್ಕಾರ ನಾಳೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಆದರೆ, ಉಚಿತ ಪಾಸ್‌ಗಾಗಿ ವಿದ್ಯಾರ್ಥಿಗಳುವ ಕಾಯೋದು ಬೇಡ, ಮುಂದೆ ಏನಾಗುತ್ತೆ ನೋಡೋಣ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv