ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆ.!

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ, ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.

ಕುಮಾರಧಾರಾ ನದಿ ತಟದಲ್ಲಿರುವ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿದ್ದು, ತೀರ್ಥಸ್ನಾನದ ಅವಕಾಶದಿಂದ ಭಕ್ತರು ವಂಚಿತರಾಗಿದ್ದಾರೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಸಾಕಷ್ಟು ಭಕ್ತಾಧಿಗಳು ದೇವರ ದರ್ಶನಕ್ಕೆ ಆಗಮಿಸಿದ್ರು. ಇದೀಗ ಮಳೆಯ ಆರ್ಭಟಕ್ಕೆ ಸರಿಯಾಗಿ ದೇವರ ದರ್ಶನ ಪಡೆಯಲು ಆಗದೇ ಪರದಾಡುವಂತಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv