ಕುಂದಗೋಳ ಉಪಸಮರ: ಬಿಜೆಪಿ ಅಭ್ಯರ್ಥಿ ಎಸ್‌.ಐ ಚಿಕ್ಕನಗೌಡರ ಮತದಾನ

ಹುಬ್ಬಳ್ಳಿ: ಇಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆಯಿಂದ ಮತದಾನ ಆರಂಭಗೊಂಡಿದೆ. ಬಿಜೆಪಿ ಅಭ್ಯರ್ಥಿ ಎಸ್.ಐ ಚಿಕ್ಕನಗೌಡರ ಮತದಾನ ಮಾಡಿದ್ದಾರೆ. ಅದರಗುಂಚಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಕುಟುಂಬ ಸಮೇತರಾಗಿ ಬಂದು, ಸರತಿ ಸಾಲಿನಲ್ಲಿ ನಿಂತು ಚಿಕ್ಕನಗೌಡರ ಮತ ಚಲಾಯಿಸಿದರು.

ಮತದಾನಕ್ಕೂ ಮುನ್ನ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದರು. ಸಿದ್ದಾರೂಢ ಮಠದಿಂದ ಯರಗುಪ್ಪಿಗೆ ಆಗಮಿಸಿ, ಪತಿ ದಿ. ಸಿ.ಎಸ್. ಶಿವಳ್ಳಿ ಗದ್ದುಗೆಗೆ ಪೂಜೆ ಸಲ್ಲಿಸಿದರು.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv