ಕುರುಬ ಸಮುದಾಯದ 4 ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಮೈಸೂರು: ಕುರುಬ ಸಮುದಾಯ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಕಾಂಗ್ರೆಸ್​ಗೆ ಮತಹಾಕಿದ್ದೇವೆ.  ಆದರೆ ಸಚಿವ ಸಂಪುಟದಲ್ಲಿ ಕುರುಬ ಸಮುದಾಯಕ್ಕೆ ಸರಿಯಾದ ಸ್ಥಾನಮಾನ ನೀಡಿಲ್ಲ ಎಂದು ಆರೋಪಿಸಿ ಮೈಸೂರು ಜಿಲ್ಲಾ ಕುರುಬ ಸಮುದಾಯದಿಂದ ಪ್ರತಿಭಟನೆ ನಡೆಸಲಾಯ್ತು.
ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಉಂಡ ಮನೆಗೆ ದ್ರೋಹ ಬಗೆದಂತೆ ಕಾಂಗ್ರೆಸ್ ಸಿದ್ದರಾಮಯ್ಯನವರನ್ನು ಕಡೆಗಣಿಸಿದೆ ಎಂದು ಆರೋಪಿಸಿದ ಕಾರ್ಯಕರ್ತರು, ಕೂಡಲೇ ಕುರುಬ ಸಮುದಾಯದ 4 ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಇಲ್ಲವಾದರೆ ಮುಂದಿನ ದಿಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv