2 ತಿಂಗಳ ಬಾಣಂತಿ ಸಾವು: ವೈದ್ಯರ ವಿರುದ್ಧ ಅಸಮಾಧಾನ

ದಾವಣಗೆರೆ: 2 ತಿಂಗಳ ಬಾಣಂತಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ಮೂರು ದಿನದ ಹಿಂದೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿ ಜ್ಯೋತಿ (23) ಅಸುನೀಗಿದ್ದು, ಮೃತ ಮಹಿಳೆಯ ಕುಟುಂಬದವರು ವೈದ್ಯರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಶ್ರೀರಾಮ ನಗರದ ಬಾಣಂತಿ ಜ್ಯೋತಿ ಅವರನ್ನು ಅನಾರೋಗ್ಯದಿಂದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯ ವೈದ್ಯರು ಬಾಣಂತಿಗೆ ರಕ್ತದ ಕೊರತೆಯಿದೆ ಎಂದು ಹೇಳಿದ್ದರು. ಮೂರು ದಿನದಲ್ಲಿ ಜ್ಯೋತಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಹೀಗಾಗಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಪೋಷಕರು ಆಸ್ಪತ್ರೆಯಲ್ಲಿ ಅಂಗಲಾಚಿದ್ದಾರೆ. ಇಷ್ಟೆಲ್ಲ ನಡೆದರೂ ಜಿಲ್ಲಾ ವೈದ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ. ತಾಯಿಯನ್ನು ಕಳೆದುಕೊಂಡ 2 ತಿಂಗಳ ಮಗು ತಬ್ಬಲಿಯಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv