ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ನೆಲಮಂಗಲ:  ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಮಲ್ಲಾಪುರದ ಕೆರೆಯೊಂದರಲ್ಲಿ ಭಾನುವಾರ ಬೆಳಗ್ಗೆ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.
ಕೆರೆ ಬಳಿ ಹೋಗಿದ್ದ ಸ್ಥಳೀಯರೊಬ್ಬರಿಗೆ ಮಹಿಳೆಯ ಶವ ಕಂಡಿದ್ದು, ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನೆ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಶವವನ್ನು ಹೊರತೆಗೆದಿದ್ದಾರೆ. ಘಟನೆ ಸಂಬಂಧ ನೆಲಮಂಗಲ ಟೌನ್​​ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *