ಜಮೀನು ವಿವಾದ ಹಿನ್ನಲೆ ಮಹಿಳೆಯರಿಬ್ಬರ ಮೇಲೆ ಹಲ್ಲೆ

ಬೆಂಗಳೂರು ಗ್ರಾಮಾಂತರ: ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯೊರ್ವ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಪಾಪಭೋವಿಪಾಳ್ಯ ಗ್ರಾಮದಲ್ಲಿ ನಡೆದಿದೆ. ವೆಂಕಟಲಕ್ಷ್ಮಮ್ಮ ಹಾಗೂ ಭಾಗ್ಯಮ್ಮ ಎಂಬುವರ ಮೇಲೆ ಸುರೇಶ್ ಹಲ್ಲೆ ನೆಡೆಸಿದ್ದರು. ವೆಂಕಟಲಕ್ಷ್ಮಮ್ಮ ಎಂಬುವರ ತಂದೆ ಸಿದ್ದಪ್ಪ ಪಿತ್ರಾರ್ಜಿತ ಆಸ್ತಿ ಹೊಂದಿದ್ದರು. ಗ್ರಾಮದ ಸುರೇಶ್ ಎಂಬುವರು ಜೆಸಿಬಿ ತಂದು ಅನಧಿಕೃತವಾಗಿ ಜಮೀನಿಗೆ ಪ್ರವೇಶ ಮಾಡಿದ್ದರು. ಅಲ್ಲದೆ ಮಾಂಗಲ್ಯ ಸರ ಕಿತ್ತು, ಹಲ್ಲೆ ನೆಡೆಸಿದ್ದಾರೆ. ವೆಂಕಟಲಕ್ಷ್ಮಮ್ಮ ಹಾಗೂ ಭಾಗ್ಯಮ್ಮ ಆರೋಪ ಮಾಡಿದ್ದಾರೆ. ಹಲ್ಲೆಗೊಳಗಾದ ಭಾಗ್ಯಮ್ಮ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *