ಅಬ್ಬಾ.. ಕಾಡ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು..!

ರಾಮನಗರ: ತಾಲೂಕಿನ ಮುತ್ತುರಾಯನಪುರ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಸಿಬ್ಬಂದಿ ಇಟ್ಟಿದ ಬೋನಿಗೆ ಬಿದ್ದಿದೆ. ಕಳೆದ ಒಂದು ತಿಂಗಳಿಂದ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ತಿದ್ದ ಚಿರತೆ ಗ್ರಾಮಸ್ಥರಲ್ಲಿ ಭೀತಿ ಉಂಟು ಮಾಡಿತ್ತು. ಗ್ರಾಮಸ್ಥರ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಗ್ರಾಮದ ಭಾಸ್ಕರ್ ಎಂಬುವರ ತೋಟದಲ್ಲಿ ಚಿರತೆ ಸೆರೆಗೆ ಬೋನು ಇಟ್ಟಿದ್ದರು. ಐದು ದಿನಗಳ ಹಿಂದೆಯೇ ಇಟ್ಟಿದ್ದ ಬೋನಿಗೆ ಇವತ್ತು ಚಿರತೆ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಚಿರತೆ ಸೆರೆಯಿಂದ ಗ್ರಾಮಸ್ಥರಲ್ಲಿ ಆತಂಕ ದೂರಾಗಿದೆ.

Leave a Reply

Your email address will not be published. Required fields are marked *