ಮತ್ತೂರು ಗ್ರಾಮದಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ

ದಾವಣಗೆರೆ: ಹರಪನಹಳ್ಳಿ ತಾಲೂಕಿನ ಮತ್ತೂರು ಗ್ರಾಮದಲ್ಲಿ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ. ಒಂದೇ ಸ್ಥಳದಲ್ಲಿ ಒಂದೇ ತಿಂಗಳಲ್ಲಿ ಮೂರು ಚಿರತೆಗಳು ಬೋನಿಗೆ ಬಿದ್ದಂತಾಗಿದೆ. ಮತ್ತೂರು ಗ್ರಾಮದ ಇಟ್ಟಿಗಿ ಹನಮಂತಪ್ಪ ಅವರ ಜಮೀನಿನಲ್ಲಿ ಬೋನು ಇಡಲಾಗಿತ್ತು. ಇಂದು ಬೆಳಿಗ್ಗೆ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ. ಈ ಹಿಂದೆ ಇದೇ ಜಾಗದಲ್ಲೇ ಎರಡು ಚಿರತೆಗಳು ಬೋನಿಗೆ ಬಿದ್ದಿದ್ದವು. ಇನ್ನೂ‌ ನಾಲ್ಕು ಚಿರತೆಗಳು ಈ ಪ್ರದೇಶದಲ್ಲಿ ಇರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: conatct@firstnews.tv