ಬೋನಿಗೆ ಬಿದ್ದ ಚಿರತೆ, ಜನರಿಗೆ ತಪ್ಪಿತು ಚಿಂತೆ..!

ಚಿತ್ರದುರ್ಗ: ಕಳೆದ ಒಂದು ತಿಂಗಳಿಂದ ಉಪದ್ರ ನೀಡುತ್ತ ಅರಣ್ಯಾಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಇಂದು ಬೆಳಗ್ಗೆ ಚಿರತೆ ಬಿದ್ದಿದೆ. ಈ ಹೊಸದುರ್ಗದ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಕಳೆದ ಒಂದು ತಿಂಗಳ ಹಿಂದೆ ಚಿರತೆ ಓರ್ವ ಮಹಿಳೆ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು. ಕೂಡಲೇ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದ ಚಿರತೆಯನ್ನು ನೋಡಲು ಗ್ರಾಮಸ್ಥರು ಕಿಕ್ಕಿರಿದು ಸೇರಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv