ಲಿಂಗಾಯತ ಧರ್ಮ ವಿಭಜನೆ: ನಮ್ಮಿಂದ ತಪ್ಪಾಗಿದೆ ಎಂದ ಸಚಿವ ಡಿ.ಕೆ. ಶಿವಕುಮಾರ್

ಗದಗ: ವೀರಶೈವ-ಲಿಂಗಾಯತ ಧರ್ಮ ವಿಭಜನೆ ವಿಚಾರವಾಗಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಪ್ರಥಮ ಬಾರಿಗೆ ತಪ್ಪೊಪ್ಪಿಕೊಂಡಿದ್ದಾರೆ.
ನಗರದಲ್ಲಿ ರಂಭಾಪುರಿ ಶ್ರೀಗಳ ದಸರಾ ಧರ್ಮಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಸರ್ಕಾರ ಅಧಿಕಾರದಲ್ಲಿದ್ದಾಗ ನಾವು ದೊಡ್ಡ ತಪ್ಪೊಂದನ್ನು ಮಾಡಿದ್ದೇವೆ. ನಮ್ಮ ಸರ್ಕಾರದಿಂದ ದೊಡ್ಡ ಅಪರಾಧವಾಗಿದೆ. ನಾನೂ ಸಹ ಆ ಸರ್ಕಾರದಲ್ಲಿ ಮಂತ್ರಿಯಾಗಿದ್ದೆ. ಹೀಗಾಗಿ ನಾನೂ ಕೂಡಾ ತಪ್ಪು ಮಾಡಿದ್ದೇನೆ ಎಂದರು.
ಸರ್ಕಾರದವರು, ರಾಜಕೀಯದವರು ಧರ್ಮದ ವಿಚಾರದಲ್ಲಿ ಜಾತಿಯ ವಿಚಾರದಲ್ಲಿ ಕೈ ಹಾಕಬಾರದು. ಹಾಕಿದರೆ ಏನಾಗುತ್ತದೆ ಅನ್ನೋದಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂದ ಜನಾಭಿಪ್ರಾಯವೇ ಸಾಕ್ಷಿ. ದಯವಿಟ್ಟು ನಾವು, ನಮ್ಮ ಸರ್ಕಾರ ತಪ್ಪು ಮಾಡಿದ್ರೆ ನಿಮ್ಮ ಕ್ಷಮಾಪಣೆ ಇರಲಿ. ಹೃದಯತುಂಬಿ ನಮ್ಮನ್ನು ಕ್ಷಮಿಸಿ ಎಂದು ಸಚಿವ ಡಿ.ಕೆ. ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.

 ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv