ಲಿಂಗಾಯತರು ಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ: ಸಿದ್ದರಾಮ ಸ್ವಾಮೀಜಿ

ಬೆಳಗಾವಿ: ಲಿಂಗಾಯತ ಧರ್ಮ ಈಗ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಲಿಂಗಾಯತರು ಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ ಅಂತಾ ಬೆಳಗಾವಿ ನಾಗನೂರ ರುದ್ರಾಕ್ಷಿಮಠದ ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ.

ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ನಾವೆಲ್ಲಾ ಪ್ರತಿಭಟನೆ ಮಾಡಿದ್ದೇವೆ. ನಮ್ಮೆಲ್ಲರ ಒತ್ತಾಯದ ಮೇರೆಗೆ ರಾಜ್ಯ ಸರ್ಕಾರ ಸತ್ಯಶೋಧನಾ ಸಮಿತಿ ರಚನೆ ಮಾಡಿ ವರದಿ ಪಡೆದುಕೊಂಡಿತ್ತು. ಸತ್ಯ ಶೋಧನಾ ವರದಿಯನ್ನು ಎಥಾವತ್ತಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ ಎಂದರು. ಕೇಂದ್ರ ಸರ್ಕಾರದಿಂದ ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸು ವಾಪಸ್ ಬಂದಿದೆ ಎಂದು ಸುದ್ದಿ ಹರಡಲಾಗುತ್ತಿದೆ. ಆದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಲ್ಪ ಸಂಖ್ಯಾತ ಇಲಾಖೆ ಆಯುಕ್ತರನ್ನ ಪ್ರಶ್ನಿಸಿದರೇ ಅಂತಹ ಯಾವುದೇ ಕಡತ ವಾಪಸ್ ಬಂದಿಲ್ಲ ಎನ್ನುತ್ತಿದ್ದಾರೆ ಎಂದರು. ಲಿಂಗಾಯತ ಧರ್ಮದ ಶಿಫಾರಸು ವಾಪಸ್ ಸುದ್ದಿ ಕೇಳಿ, ಪಂಚ ಪೀಠಾಧೀಶರು ಸಂಭ್ರಮಿಸುತ್ತಿದ್ದಾರೆ. ಪಂಚ ಪೀಠಾಧೀಶರಿಗೆ ಲಿಂಗಾಯತ ಪ್ರತ್ಯೇಕ ಧರ್ಮ, ನಮ್ಮ ಘನತೆ, ಗೌರವ ಬೇಕಾಗಿಲ್ಲ ಎಂದು ಹರಿಹಾಯ್ದರು. ನಾವೆಲ್ಲಾ ಎಚ್ಚರವಾಗಿರಬೇಕು. ಮೈ-ಮರತೆರೆ ಇದುವರೆಗೆ ಮಾಡಿದ ಎಲ್ಲ ಪ್ರಯತ್ನ ವ್ಯರ್ಥವಾಗಲಿದೆ ಎಂದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv