ಸಾಲ ಮನ್ನಾಗೆ ಸಲಾಂ: ರೈತರ ಸಂಭ್ರಮಾಚರಣೆ

ರಾಯಚೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ 2 ಲಕ್ಷವರೆಗೆ ರೈತರ ಸಾಲ ಮನ್ನಾ ಘೋಷಣೆ ಮಾಡುತ್ತಿದ್ದಂತೆ, ಇತ್ತ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಜಿಲ್ಲಾಧ್ಯಕ್ಷ ವಿರೂಪಾಕ್ಷ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಈ ವೇಳೆ, ಸಿಎಂ ಕುಮಾರಸ್ವಾಮಿ ನುಡಿದಂತೆ ನಡೆದಿದ್ದಾರೆಂದು ಜಿಲ್ಲಾಧ್ಯಕ್ಷ ವಿರೂಪಾಕ್ಷ ತಿಳಿಸಿದ್ರು. ಇನ್ನೂ ರೈತರ ಪರ ಕಾಳಜಿ ವಹಿಸಿ ಚುನಾವಣಾ ಪೂರ್ವದಲ್ಲಿ ಸಿಎಂ ಕುಮಾರಸ್ವಾಮಿ ರೈತರಿಗೆ ಭರವಸೆ ನೀಡಿದಂತೆ ರೈತರ ಸಾಲ ಮನ್ನಾ ಮಾಡಿದ್ದಾರೆ. ಅದಕ್ಕಾಗಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡರು ರೈತರ ಪರವಾಗಿ ಸಿಎಂ ಕುಮಾರಸ್ವಾಮಿಗೆ ಅಭಿನಂದನೆ ಸಲ್ಲಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv