ರಸ್ತೆ ಸೇತುವೆಗೆ ಲಾರಿ ಡಿಕ್ಕಿ, ಲಾರಿಯಲ್ಲಿದ್ದ ಹೊಸ ಆಟೋಗಳು ಜಖಂ

ದಾವಣಗೆರೆ: ಹೊಸ ಆಟೋಗಳನ್ನು ಸಾಗಿಸುತ್ತಿದ್ದ ಲಾರಿ, ಚಾಲಕನ‌ ನಿಯಂತ್ರಣ ತಪ್ಪಿ‌ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿಯಲ್ಲಿದ್ದ ಆಟೋಗಳು ಜಖಂಗೊಂಡಿದ್ದು, ಲಾರಿ ಚಾಲಕ ಹಾಗೂ ಕ್ಲೀನರ್​ಗೆ ಸಣ್ಣಪುಟ್ಟ ಗಾಯಗಳಾಗಿವೆ.
ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ಬಳಿ ಘಟನೆ ನಡೆದಿದ್ದು, ಗಾಯಾಳು ಕ್ಲೀನರ್ ಹಾಗೂ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸ ಆಟೋಗಳನ್ನು ತುಂಬಿಕೊಂಡು‌ ಬರುತ್ತಿದ್ದ ಲಾರಿ, ಡಿಕ್ಕಿ ಹೊಡೆದ ರಭಸಕ್ಕೆ ಲಕ್ಷಾಂತರ ರೂ. ಮೌಲ್ಯದ ಆಟೋಗಳು ನೆಲಕ್ಕುರುಳಿವೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv