ಪಾಗಲ್​ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತೆ ಆತ್ಮಹತ್ಯೆ..!

ಕಲಬುರ್ಗಿ: ಪಾಗಲ್ ಪ್ರೇಮಿಯ ಬೆದರಿಕೆಯಿಂದ ಬೇಸತ್ತ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಆತ್ಮಹತ್ಯೆ ಶರಣಾಗಿರುವ ಘಟನೆ ಕಲಬುರ್ಗಿ ತಾಲೂಕಿನ ಪಾಳಾ ಗ್ರಾಮದಲ್ಲಿ ಜೂನ್ 29ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಭೀಮಾಶಂಕರ ಹಕ್ಕಿ, ಅದೇ ಗ್ರಾಮದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ತನ್ನನ್ನು ಪ್ರೀತಿಸುವಂತೆ, ಮದುವೆಯಾಗುವಂತೆ ಪೀಡಿಸುತ್ತಿದ್ದ ಎನ್ನಲಾಗ್ತಿದೆ.
ಇದರಿಂದ ಬೇಸತ್ತುಹೊಗಿದ್ದ ಬಾಲಕಿ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಆರೋಪಿಯನ್ನುಬಂಧಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕುಟುಂಬಸ್ಥರು ಬಾಲಕಿಯ ಶವವಿಟ್ಟು ಧರಣಿ ನಡೆಸಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಮಾಶಂಕರ ಹಕ್ಕಿ, ರಾಕೇಶ ಹಕ್ಕಿ, ಕಲ್ಯಾಣಿ ಹಕ್ಕಿ, ತಂದೆ ದಶರಥ ಹಕ್ಕಿ ಮತ್ತು ತಾಯಿ ಶಿವಲಿಂಗಮ್ಮ ಎಂಬವರನ್ನು ಬಂಧಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv