ಕೊಡಗು ಜಿಲ್ಲೆಯಲ್ಲಿ ತಗ್ಗಿದ ಪುನರ್ವಸು ಅಬ್ಬರ

ಕೊಡಗು: ಜಿಲ್ಲೆಯಲ್ಲಿ ಪುನರ್ವಸು ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದ್ರೆ ಕೆಲವು ಪ್ರದೇಶಗಳಲ್ಲಿ ಸತತವಾಗಿ ಮಳೆಯಾಗುತ್ತಿದೆ. ತಲಕಾವೇರಿ ವ್ಯಾಪ್ತಿಯಲ್ಲಿ ಮಳೆ ಕಡಿಮೆಯಾಗಿರುವುದರಿಂದ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಇಳಿಮುಖವಾಗಿದೆ. ಹಲವೆಡೆ ಗುಡ್ಡಕುಸಿತ, ಮರಗಳು ಧರೆಗುರುಳಿರುಳಿವೆ. ದಕ್ಷಿಣ ಕೊಡಗಿನಲ್ಲಿ ಅನೇಕ ಗದ್ದೆಗಳು ಜಲಾವೃತವಾಗಿವೆ. ತಿತಿಮತಿ ಬಳಿ ಸೇತುವೆ ದುರಸ್ತಿ ಕಾರ್ಯ ಮುಂದುವರೆದಿದ್ದು, ಹುಣಸೂರು ಮೂಲಕ ಮೈಸೂರಿಗೆ ತೆರಳುವ ವಾಹನಗಳು ಗೋಣಿಕೊಪ್ಪಲು, ಪಿರಿಯಾಪಟ್ಟಣ ಮಾರ್ಗವಾಗಿ ಸಂಚರಿಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಇಂದು ಕೂಡಾ ಅಂಗನವಾಡಿ, ಶಾಲಾ ಕಾಲೇಜಿಗೆ ರಜೆ ಘೋಷಿಸಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv