ರಾಜ್ಯ ಬಜೆಟ್‌ನಲ್ಲಿ ಕಾಫಿ ಬೆಳೆಗಾರರ ಸಾಲಮನ್ನಾಕ್ಕೆ ಆಗ್ರಹ

ಕೊಡಗು: ನಾಳೆ ರಾಜ್ಯ ಬಜೆಟ್‌ ಹಿನ್ನೆಲೆಯಲ್ಲಿ ಕಾಫಿ ಬೆಳೆಗಾರರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ಕಾಫಿ ಬೆಳೆಗಾರರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ರು. ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್‌ ಮಾಡಿ ವ್ಯಾಪಾರಸ್ಥರು ಕೂಡಾ ಹೋರಾಟಕ್ಕೆ ಬೆಂಬಲ ನೀಡಿದ್ರು. ಕಾಫಿಯೊಂದಿಗೆ ಕಾಳುಮೆಣಸು ಬೆಳೆಗಾರರ ಸಾಲವನ್ನೂ ಮನ್ನಾ ಮಾಡಲು ಒತ್ತಾಯಿಸಿದ್ರು. ಅತೀವೃಷ್ಟಿಯಿಂದ ಕಾಫಿ ಬೆಳೆಗಾರರು ಕಂಗೆಟ್ಟಿದ್ದಾರೆ. ಅಲ್ಲದೆ, ಮಾಕರುಕಟ್ಟೆಯಲ್ಲಿ ಕಾಳುಮೆಣಸು ದರ ಕುಸಿದಿದೆ. ಆದ್ದರಿಂದ ಮುಖ್ಯಮಂತ್ರಿಗಳು ಈ ಬಗ್ಗೆ ಎಚ್ಚೆತ್ತುಕೊಂಡು ರೈತರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv