ಮಲೆ ಮಾದಪ್ಪನಿಗೆ ಉಘೇ ಉಘೆ

ಮಲೆಮಹದೇಶ್ವರ: ಉಘೇ ಮಾದಪ್ಪ ಉಘೇ ಮಾದಪ್ಪ ಘೋಷವಾಕ್ಯದೊಂದಿಗೆ ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರೆಯ ಪ್ರಮುಖ ಆಕರ್ಷಣೆಯಾದ ಮಹಾರಥೋತ್ಸವ ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಅದ್ದೂರಿಯಾಗಿ ಜರುಗಿತು. ಕೊಳ್ಳೆಗಾಲ ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವವನ್ನ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಆಗಮಿಸಿದ್ದರು.

ಮಹಾರಥೋತ್ಸವಕ್ಕೂ ಮುನ್ನ ಸಾಲೂರು ಬೃಹನ್ಮಠದ ಪಟ್ಟದ ಗುರುಸ್ವಾಮಿಗಳನ್ನು ಸತ್ತಿಗೆ ಸುರಪಾನಿ ವಾದ್ಯಮೇಳಗಳೊಂದಿಗೆ ದೇವಾಲಯದ ಆವರಣಕ್ಕೆ ಕರೆತರಲಾಯಿತು. ಬಳಿಕ ಬೇಡಗಂಪಣ ಅರ್ಚಕರ ತಂಡದಿಂದ ವಿಧಿವಿಧಾನಗಳೊಂದಿಗೆ ಉತ್ಸವ ಮೂರ್ತಿಗೆ ಪೂಜೆ ನೆರವೇರಿಸಲಾಯಿತು. ನಂತರ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿ ದೇವಾಲಯದ ಆವರಣದಲ್ಲಿ ವಿವಿಧ ಪುಷ್ಪ, ತಳಿರು ತೋರಣ, ಬಣ್ಣಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗಿದ್ದ ರಥೋತ್ಸವದಲ್ಲಿ ಉತ್ಸವ ಮೂರ್ತಿಯನ್ನ ಪ್ರತಿಷ್ಠಾಪಿಸಲಾಯಿತು. ಮಹದೇಶ್ವರ ಬೆಟ್ಟದ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಪಹರೆ ಏರ್ಪಡಿಸಲಾಗಿತ್ತು. ರಥೋತ್ಸವದ ವೇಳೆ ರಥ ಎಳೆಯಲು ಭಕ್ತರು ನಾ ಮುಂದು ತಾ ಮುಂದು ಅಂತ ಮುಗಿಬಿದ್ದ ಹಿನ್ನೆಲೆ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

Leave a Reply

Your email address will not be published. Required fields are marked *