ರಮೇಶ್ ಜಾರಕಿಹೊಳಿ ಭೇಟಿಯಾದ ಶಾಸಕ ಮಹೇಶ್ ಕುಮಟಳ್ಳಿ, ಮತ್ತೆ ಮೂಡಿದ ಕುತೂಹಲ

ಬೆಂಗಳೂರು: ಗೋಕಾಕ್ ಕಾಂಗ್ರೆಸ್ ರೆಬೆಲ್​ ಶಾಸಕ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಇಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಭೇಟಿ ನೀಡಿದ್ದಾರೆ. ನಗರದಲ್ಲಿರುವ ಸೆವೆನ್ ಮಿನಿಸ್ಟರ್ ಕ್ವಾಟ್ರಸ್​ನಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಭೇಟಿ  ನೀಡಿದ್ರು. ಈ ವೇಳೆ ಅವರು, ಕ್ಷೇತ್ರದ ಕೆಲಸಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿಯವರೊಂದಿಗೆ ಚರ್ಚಿಸಲು ಹೋಗುತ್ತಿದ್ದೇನೆ ಎಂದು ಹೇಳಿದ್ದಾರಂತೆ.

ಒಂದು ತಿಂಗಳಿನಿಂದ ಶಾಸಕ ಮಹೇಶ್ ಕುಮಟಳ್ಳಿ ಅವರು ಕುಂದಗೋಳ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ ಮಹೇಶ್ ಕುಮಟಳ್ಳಿ,  ಶಾಸಕ ರಮೇಶ್ ಜಾರಕಿಹೊಳಿಯವರನ್ನ ಭೇಟಿ ಮಾಡದೆ ದೂರ ಉಳಿದಿದ್ದರು. ಇನ್ನು ಕೆಲ ದಿನಗಳಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶದ ದಿನಾಂಕ ಸಮೀಪಿಸುತ್ತಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಆಗುತ್ತಿರುವ ಬೆಳವಣಿಗೆಗಳು ಭಾರಿ ಕುತೂಹಲ ಮೂಡಿಸುತ್ತಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv