ದ್ವೇಷದ ಹಿನ್ನೆಲೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ

ರಾಯಚೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿನ ಮಾರಕಾಸ್ತ್ರಗಳಿಂದ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಶಕ್ತಿ ನಗರದಲ್ಲಿ ನಡೆದಿದೆ. ಮೌಲಾಸಾಬ್ ಎಂಬ ವ್ಯಕ್ತಿ ಮೇಲೆ ರೌಡಿಶೀಟರ್ ಮಹಮ್ಮದ್ ಗೌಸ್ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ ಅನ್ನೋ ಆರೋಪ ಕೇಳಿ ಬಂದಿದೆ. 2010ರಲ್ಲಿ ಮಹಮ್ಮದ್ ಗೌಸ್ ತಮ್ಮನ ಮೇಲೆ ಕಳ್ಳತನದ ಕೇಸ್ ದಾಖಲಾಗಿತ್ತು. ಈ ಕೇಸ್ ದಾಖಲಿಸುವಲ್ಲಿ ಮೌಲಾಸಾಬ್​​ನ ಕೈವಾಡವಿದೆ ಎಂಬ ಹಳೆ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದ ಆರೋಪ ಕೇಳಿ ಬಂದಿದೆ. ಗಾಯಾಳು ಮೌಲಾಸಾಬ್ ಅರ್​ಟಿಪಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆ ಸಂಬಂಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂರ್ಪಕಿಸಿ: contact@firstnews.tv