ತಲ್ವಾರ್​ನಿಂದ ಕೊಚ್ಚಿ ವ್ಯಕ್ತಿಯ ಕೊಲೆ

ಹುಬ್ಬಳ್ಳಿ: ತಲ್ವಾರ್​ನಿಂದ ಕೊಚ್ಚಿ ವ್ಯಕ್ತಿಯೋರ್ವನನ್ನ ಕೊಲೆ ಮಾಡಿರೋ ಘಟನೆ ಹುಬ್ಬಳ್ಳಿಯ ಮಂಟೂರು ರಸ್ತೆಯ ತಬೀಬ್ ಲ್ಯಾಂಡ್​ನ ಎರಡನೇ ಕ್ರಾಸ್ ಬಳಿ ನಡೆದಿದೆ.
ನಿನ್ನೆ ತಡರಾತ್ರಿ‌ ಇಮ್ತಿಯಾಜ್ ಕಣವಿ(35) ಊಟಕ್ಕೆ ಎಂದು ಹೊರಗಡೆ ಹೋಗಿದ್ದ ವೇಳೆ, ದಾವೂದ್ ನಾದಫ್ ಹಾಗೂ ಆತನ ಸಹಚರರು ಇಮ್ತಿಯಾಜ್ ಮೇಲೆ ದಾಳಿ ನಡೆಸಿ ಕೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಶಹರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ:contact@firstnews.tv