ಒಲ್ಲದ ಮನಸ್ಸಿಂದಲೇ ಮಂಡ್ಯ ಕೈ ನಾಯಕರ ಒಪ್ಪಿಗೆ; ಜಂಟಿ ಪ್ರಚಾರಕ್ಕೆ ಸಾಥ್​

ಬೆಂಗಳೂರು: ಜೆಡಿಎಸ್​ ವರಿಷ್ಠ ದೇವೇಗೌಡ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಾಳೆ ಮಂಡ್ಯದಲ್ಲಿ ಜಂಟಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಕೈ ನಾಯಕರ ಮನವೊಲಿಸಲು ಕೆಪಿಸಿಸಿ ಅಧ್ಯಕ್ಷ ಕಸರತ್ತು ನಡೆಸುತ್ತಿದ್ದಾರೆ. ಇಂದು ನಗರದ ಖಾಸಗಿ ಹೋಟೆಲ್​ನಲ್ಲಿ ಮಂಡ್ಯ ಜಿಲ್ಲಾ ನಾಯಕರ ಜೊತೆ ಸಭೆ ನಡೆಸಿದ ದಿನೇಶ್ ಗುಂಡೂರಾವ್, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿದರು. ಸಭೆಯಲ್ಲಿ ಮಾಜಿ ಸಚಿವ ಚೆಲುವರಾಯಸ್ವಾಮಿ, ಪಿ.ಎಂ ನರೇಂದ್ರ ಸ್ವಾಮಿ ಸೇರಿದಂತೆ ಹಲ ನಾಯಕರ ಜೊತೆ ಚರ್ಚೆ ನಡೆಸಿದ್ರು. ಸಭೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ಒಲ್ಲದ ಮನಸ್ಸಿನಲ್ಲೇ ನಾಯಕರು ಒಪ್ಪಿಗೆ ಕೊಟ್ಟಿದ್ದಾರೆ. ನಾಳೆ ನಡೆಯಲಿರುವ ಜಂಟಿ ಪ್ರಚಾರದಲ್ಲಿ ಮಂಡ್ಯ ಜಿಲ್ಲಾ ಕೈ ನಾಯಕರು ಸಾಥ್​ ನೀಡಲಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv