ವೀರ ಯೋಧ ಪಂಚಭೂತಗಳಲ್ಲಿ ಲೀನ.. ‘ಗುರು ಅಮರ್​ ರಹೇ’

ಮಂಡ್ಯ: ದೇಶದ ಹೆಮ್ಮೆಯ ವೀರ ಯೋಧ ಹೆಚ್​​.ಗುರು ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನವಾಯ್ತು. ಪುಲ್ವಾಮ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಹುತಾತ್ಮರಾಗಿದ್ದ ಯೋಧ ಗುರು ಅವರ ಪಾರ್ಥಿವ ಶರೀರವನ್ನು ತವರು ನೆಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಗೆ ತರಲಾಯ್ತು. ಕೆ.ಎಂ.ದೊಡ್ಡಿ ಸಮೀಪದ‌ ಮೆಳ್ಳಳ್ಳಿ ಸರ್ಕಾರಿ ಜಮೀನಿನಲ್ಲಿ ಮಡಿವಾಳ ಸಂಪ್ರದಾಯದ ಜೊತೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಯ್ತು.

ಈ ವೇಳೆ ಅಂತ್ಯಕ್ರಿಯೆಯಲ್ಲಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್, ಕೇಂದ್ರ ಸಚಿವ ಡಿವಿ ಸದಾನಂದಗೌಡ, ಮಾಜಿ ಸಿಎಂ ಎಸ್​.ಎಂ.ಕೃಷ್ಣ, ಸಚಿವರುಗಳಾದ ಸಿಎಸ್ ಪುಟ್ಟರಾಜು, ಡಿಸಿ ತಮ್ಮಣ್ಣ, ಸಾರಾ ಮಹೇಶ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ವಾಟಾಳ್ ನಾಗರಾಜ್, ನಟ ಪ್ರಕಾಶ್ ರೈ, ಮಾಜಿ ಸಚಿವ ಚೆಲುವರಾಯಸ್ವಾಮಿ, ಮಾಜಿ ಶಾಸಕ ನರೇಂದ್ರಸ್ವಾಮಿ, ನಿರ್ಮಾಪಕ ಸಾ.ರಾ.ಗೋವಿಂದ್, ಮುರುಘಾ ಶ್ರೀ, ಬಿಗ್​ಬಾಸ್ 6 ವಿನ್ನರ್ ಶಶಿಕುಮಾರ್, ನಟ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸೇರಿದಂತೆ ಸಾವಿರಾರು ಮಂದಿ ಸಾರ್ವಜನಿಕರು ಭಾಗಿಯಾಗಿದ್ರು.