ಆಯತಪ್ಪಿ ಬಿದ್ದು ಮಹಿಳೆ ಸಾವು

ಮಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಏಳನೇ ಮಹಡಿಯಿಂದ ಬಿದ್ದು ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ನಗರದ ಪಾಂಡೇಶ್ವರ ಬಳಿಯ ಪೊಲೀಸ್ ಲೈನ್​ನಲ್ಲಿ ನಡೆದಿದೆ. ಚಿನ್ನಮ್ಮ (27) ಮೃತ ಮಹಿಳೆ. ಇವರು ಗದಗ ಜಿಲ್ಲೆಯ ಗಜೇಂದ್ರಗಡ ನಿವಾಸಿಯಾಗಿದ್ದು ಕೆಲ ವರ್ಷಗಳ ಹಿಂದೆ ಕೆಲಸ ಅರಸಿ ಮಂಗಳೂರಿಗೆ ಬಂದಿದ್ದರು. ಪೊಲೀಸ್​ ಲೈನ್​ನಲ್ಲಿ ಪೊಲೀಸರಿಗೆ ನೂತನವಾಗಿ ನಿರ್ಮಾಣವಾಗುತ್ತಿದ್ದ ಕ್ವಾರ್ಟರ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಚಿನ್ನಮ್ಮ, ಸಿಮೆಂಟ್ ಹಚ್ಚಿದ ಗೋಡೆಗೆ ನೀರು ಸಿಂಪಡಿಸುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ. ಈ ಸಂಬಂಧ ಪಾಂಡೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv