ಮಾರುಕಟ್ಟೆಗೆ ಮೂಲ ಸೌಕರ್ಯ ಒದಗಿಸುವಂತೆ ಪ್ರತಿಭಟನೆ

ರಾಯಚೂರು: ನಗರದ ತರಕಾರಿ ಮಾರುಕಟ್ಟೆಯ ಅವ್ಯವಸ್ಥೆಯಿಂದ ರೋಸಿ ಹೋದ ತರಕಾರಿ ಮಾರಾಟಗಾರರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ರು. ನಗರದ ಉಸ್ಮಾನಿಯಾ ತರಕಾರಿ ಮಾರುಕಟ್ಟೆಯ ಹಿಂಭಾಗದಲ್ಲಿ ರೈತರಿಗೋಸ್ಕರ ರೈತ ಮಾರುಕಟ್ಟೆಯನ್ನು ನಗರಸಭೆಯಿಂದ ನಿರ್ಮಿಸಲಾಗಿದೆ. ಆದ್ರೆ ರೈತ ಮಾರುಕಟ್ಟೆ ನಿರ್ಮಾಣ ಮಾಡಿ ಹಲವಾರು ವರ್ಷಗಳು ಕಳೆದ್ರೂ ಕುಡಿಯುವ ನೀರಿನ ವ್ಯವಸ್ಥೆ, ಗಾರ್ಬೆಜ್ ಕ್ಲಿನಿಂಗ್, ಶೌಚಾಲಯ ಹೀಗೆ ಮೂಲ ಸೌಲಭ್ಯಗಳನ್ನು ಒದಗಿಸಿಲ್ಲ. ಇದ್ರಿಂದ ಮಾರಾಟಕ್ಕೆ ಬರುವ ರೈತರಿಗೆ ಹಾಗೂ ಖರೀದಿಗೆ ಬರುವ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಇನ್ನೂ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ರೂ ಯಾವುದೇ ಪ್ರಯೋಜನ ಆಗಿಲ್ಲ. ನಗರಸಭೆ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಟನೆ ನಡೆಸಿದೆ. ತರಕಾರಿ ಮಾರುಕಟ್ಟೆಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ನಗರ ಸಭೆಗೆ ಆಗಮಿಸಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು. ಮೂಲ ಸೌಲಭ್ಯಗಳನ್ನು ಒದಗಿಸುವಂತೆ ನಗರಸಭೆ ಆಯುಕ್ತ ರಮೇಶ್ ನಾಯಕ್​ಗೆ ಮನವಿ ಪತ್ರ ನೀಡಿದ್ರು. ಶೀಘ್ರದಲ್ಲಿ ಸಮಸ್ಯೆ ಬಗೆ ಹರಿಸದಿದ್ರೆ ಮುಂದಿನ ದಿನಗಳಲ್ಲಿ ರಾಯಚೂರು ಬಂದ್ ಮಾಡಿ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv