ಮದುವೆಯಾದ ಮಾರನೆ ದಿನವೇ ವರ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಮದುವೆಯಾದ ಮಾರನೆ ದಿನವೇ ನವ ವಿವಾಹಿತ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ನಡೆದಿದೆ. ಮುನಿರಾಜು ಎಂಬುವವರು ಸೋಮವಾರ ತನ್ನ ಅಕ್ಕನ ಮಗಳು ಚೈತ್ರಾ ಜೊತೆ ನವ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಮಾರನೆ ದಿನವೇ ಮುನಿರಾಜು ತಮ್ಮ ಮನೆಯಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುನಿರಾಜು ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *