ಕಾರು-ಟಾಟಾ ಏಸ್ ಮುಖಾಮುಖಿ: ಚಾಲಕರಿಗೆ ಗಂಭೀರ ಗಾಯ​

ರಾಯಚೂರು: ಮಾರುತಿ ಸುಝುಕಿ ಬ್ರೆಸ್ಸಾ ಕಾರು-ಟಾಟಾ ಏಸ್ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಿಂಗಸೂಗೂರು ತಾಲ್ಲೂಕಿನ ಗೊಲಪಲ್ಲಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಬಳಿಯ ಬೀದರ್- ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲಬುರ್ಗಿಯಿಂದ ಸಿರಗುಪ್ಪ ಕಡೆಗೆ ಹೂಗುತ್ತಿದ್ದ ಕಾರು ಎದುರಿನಿಂದ ತೆಂಗಿನ ಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಏಸ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡೂ ವಾಹನ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಹೆಸರು ಇನ್ನೂ ತಿಳಿದು ಬಂದಿಲ್ಲ. ಇನ್ನು ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಟ್ಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿರುವುದು ತಿಳಿದುಬಂದಿದೆ.