ದೇಶದ ಸೈನ್ಯ‌ ಮೋದಿ ಸೈನ್ಯವಲ್ಲ -ಎಂ.ಬಿ.ಪಾಟೀಲ್

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಲೋಕಸಭೆ ಅಭ್ಯರ್ಥಿಗಳು ಮೋದಿ ಮುಖ ನೋಡಿ ವೋಟ್ ಹಾಕಿ ಎನ್ನುತ್ತಿದ್ದಾರೆ. ಪುಲ್ವಾಮ ದಾಳಿಯ ವೈಫಲ್ಯವನ್ನ ಮುಚ್ಚಿಕೊಳ್ಳಲು ಬಿಜೆಪಿ ಯತ್ನ ಮಾಡ್ತಿದೆ ಎಂದು ಗೃಹ ಸಚಿವ ಎಂ.ಬಿ ಪಾಟೀಲ್ ಆರೋಪಿಸಿದ್ದಾರೆ.

ನಗರದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಎಂ ಬಿ ಪಾಟೀಲ್, ಸೈನಿಕರ ಕಾರ್ಯವನ್ನು ನಾವು ಮೆಚ್ಚಿಕೊಳ್ಳುತ್ತೇವೆ. ಆದ್ರೆ ಭಾರತದ ಸೈನ್ಯ‌ ಮೋದಿ ಸೈನ್ಯವಲ್ಲ. 250 ಕೆಜಿ ಆರ್​ಡಿಎಕ್ಸ್  ನಮ್ಮ ದೇಶಕ್ಕೆ ಹೇಗೆ ಬಂತು..? ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಭದ್ರತೆ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೆ ರಾಮ ಜನ್ಮ ಭೂಮಿ ವಿವಾದ ಬಳಸಿಕೊಂಡು ಮೋದಿ ಅಧಿಕಾರಕ್ಕೆ ಬಂದಿದ್ದರು. ಈಗ ಸೈನ್ಯ ಮುಂದೆ ಇಟ್ಟುಕೊಂಡು ಮತ ಕೇಳುತ್ತಿದ್ದಾರೆ. ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರು ಸಂವಿಧಾನ ಬದಲಾವಣೆ ಮಾತಾಡುತ್ತಿದ್ದಾರೆ. ಆದ್ರೆ ಅವರು ಸಂವಿಧಾನದ ಅಡಿಯಲ್ಲಿ ಗೆದ್ದು ಬಂದಿದ್ದಾರೆ. ಬಿಜೆಪಿ ಅಂದೇ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕಾಗಿತ್ತು ಅಂತಾ ಕಿಡಿಕಾರಿದರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv