ಬೆಳೆ ಹಾನಿಯಾಗದಂತೆ ಕ್ರಮ: ಪರಿಸರ ಸಚಿವ ಶಂಕರ್​​

ಹಾವೇರಿ: ಮೈತ್ರಿ ಸರ್ಕಾರ 5 ವರ್ಷ ಆಡಳಿತವನ್ನು ಪೂರೈಸುತ್ತದೆ. ಸಮ್ಮಿಶ್ರ ಸರ್ಕಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಸುರಕ್ಷಿತವಾಗಿ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಇನ್ನು ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದಕ್ಕೆ ಸಹಜವಾಗಿ ಕೆಲ ಶಾಸಕರಿಗೆ ಬೇಸರ ತಂದಿದೆ. ಅದನ್ನು ಶಮನ ಮಾಡಲು ಕಾಂಗ್ರೆಸ್​ ಮತ್ತು ಜೆಡಿಎಸ್​ ನಾಯಕರು ಯಶಸ್ವಿಯಾಗಿದ್ದಾರೆ ಎಂದು ಅರಣ್ಯ ಹಾಗೂ ಪರಿಸರ ಸಚಿವ ಆರ್​. ಶಂಕರ್​​ ಹೇಳಿದ್ದಾರೆ.

ಸಚಿವರಾದ ಮೇಲೆ ಮೊದಲ ಬಾರಿಗೆ ಜಿಲ್ಲೆಯ ರಾಣೇಬೆನ್ನೂರಿಗೆ ಆಗಮಿಸಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಕಾಡು ಪ್ರಾಣಿಗಳಿಂದ ಬೇಸತ್ತಿದ್ದಾರೆ. ಕಾಡು ಪ್ರಾಣಿಗಳು ನಾಡಿನತ್ತ ಮುಖ ಮಾಡಲು ಕಾರಣವೇನು ಎಂಬುದು ಮೊದಲು ತಿಳಿದುಕೊಳ್ಳಬೇಕು. ಶೀಘ್ರವೇ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಚರ್ಚಿಸುತ್ತೇನೆ. ವನ್ಯಜೀವಿಗಳಿಂದ ರೈತರ ಬೆಳೆ ಹಾನಿಯಾಗದಂತೆ ತಡೆಯಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಸಚಿವ ಆರ್​​. ಶಂಕರ್​ ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv