‘ರಕ್ತ ಕೊಟ್ಟೆವು, ಸ್ಟೈಫಂಡ್ ಬಿಡೇವು’

ದಾವಣಗೆರೆ: ಶಿಷ್ಯ ವೇತನಕ್ಕೆ ಆಗ್ರಹಿಸಿ‌ ವೈದ್ಯಕೀಯ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿ‌ನಕ್ಕೆ‌ ಕಾಲಿಟ್ಟಿದೆ. ಕಳೆದ ಎಂಟು ತಿಂಗಳಿನಿಂದ ಶಿಷ್ಯ ವೇತನ ನಿಲ್ಲಿಸಿರುವ ರಾಜ್ಯ ಸರ್ಕಾರ‌ ವಿರುದ್ಧ 230 ವೈದ್ಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು 50 ವಿದ್ಯಾರ್ಥಿಗಳು ರಕ್ತದಾನ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದ್ರು. ‘ರಕ್ತ ಕೊಟ್ಟೆವೂ ಸ್ಟೈಫಂಡ್ ಬಿಡೇವು’ ಎಂಬ ಘೋಷ ವಾಖ್ಯದೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿಷ್ಯ ವೇತನ ನೀಡುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: conatct@firstnews.tv