ಶಿಷ್ಯ ವೇತನ ನೀಡದ ರಾಜ್ಯ ಸರ್ಕಾರದ ವಿರುದ್ಧ ಪ್ರೊಟೆಸ್ಟ್​

ದಾವಣಗೆರೆ: ಶಿಷ್ಯ ವೇತನ ನೀಡಿಲ್ಲ ಎಂದು ಆರೋಪಿಸಿ ಸರ್ಕಾರಿ ಹೆರಿಗೆ ಆಸ್ಪತ್ರೆ ಸ್ವಚ್ಛಗೊಳಿಸುವ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎಂಟು ತಿಂಗಳಿನಿಂದ ಶಿಷ್ಯ ವೇತನ ನಿಲ್ಲಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ಏಳು ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ 230 ವೈದ್ಯಕೀಯ ವಿದ್ಯಾರ್ಥಿಗಳು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: conatct@firstnews.tv