ಮನೆಗೆ ನುಗ್ಗಿದ ಹಾಲಿನ ವಾಹನ.. ಭಾರೀ ಹಾನಿ

ದಾವಣಗೆರೆ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕಚೇರಿ ಹಾಗೂ ಮನೆಗೆ  ಹಾಲಿನ ವಾಹನವೊಂದು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿರುವ ಘಟನೆ ಡೋಣೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಕ್ಕದ  ಬೋರ್ ವೆಲ್‌ಗೆ ಡಿಕ್ಕಿ ಹೊಡೆದ ವಾಹನ ನಂತರ ಕಚೇರಿ ಕಂ ಮನೆಗೆ ನುಗ್ಗಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದ್ರೆ ಅತಿವೇಗ ಚಾಲನೆಯೇ ಘಟನೆಗೆ ಕಾರಣ ಎಂಬುದು ಸ್ಥಳೀಯರ ಆರೋಪಿಸಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv