ಇಂದು ಸಿ.ಎಸ್‌. ಶಿವಳ್ಳಿ ಅಂತ್ಯಕ್ರಿಯೆ

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್‌.ಶಿವಳ್ಳಿ ವಿಧಿವಶರಾದ ಹಿನ್ನೆಲೆಯಲ್ಲಿ ಇಂದು ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ  ತರಲಾಗಿದೆ. ಕುಂದಗೋಳ ಕ್ಷೇತ್ರದ ಜನತೆಯ ಅಂತಿಮ ದರ್ಶನದ ಬಳಿಕ ಸ್ವಗ್ರಾಮ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮಕ್ಕೆ ಸಚಿವರ ಪಾರ್ಥಿವ ಶರೀರ ತರಲಾಯಿತು. ಇದಕ್ಕೂ ಮುನ್ನ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಶಿವಳ್ಳಿ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಲಾಯಿತು. ಅಂತ್ಯಕ್ರಿಯೆ ನಡೆಯುವ ಜಮೀನಿನ ಸ್ಥಳದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕೆ ಗ್ರಾಮಸ್ಥರು ಹರಿದು ಬರುತ್ತಿದ್ದು, ಸಂಜೆ ನಾಲ್ಕು ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಜೆ ಐದು ಗಂಟೆ ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಗುತ್ತದೆ.ollow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv