ಶಿವಳ್ಳಿ ನಿಧನ: ಮೂರು ದಿನ ಶೋಕಾಚರಣೆ, ಎಸ್​​ಎಲ್​​ಸಿ ಪರೀಕ್ಷೆಗೆ ತೊಂದರೆಯಿಲ್ಲ

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಹೃದಯಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಶಿವಳ್ಳಿ ನಿಧನದ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಸರ್ಕಾರಿ ಕಾರ್ಯಕ್ರಮಗಳು ರದ್ದುಗೊಳಿಸಿ, ಸರ್ಕಾರಿ ಕಟ್ಟಡಗಳ ಮೇಲಿನ ರಾಷ್ಟ್ರಧ್ವಜವನ್ನ ಅರ್ಧ ಮಟ್ಟದಲ್ಲಿ ಹಾರಿಸುವುದರ ಜೊತೆಗೆ ಧಾರವಾಡ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ ಎಸ್​​ಎಸ್​​ಎಲ್​​ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳು, ಸಿಬ್ಬಂದಿಗಳ ಹೊರತುಪಡಿಸಿ ಜಿಲ್ಲೆಯಲ್ಲಿ ರಜೆ ಪ್ರಕಟಿಸಲಾಗಿದೆ. ಎಸ್​​ಎಸ್​​ಎಲ್​​ಸಿ ಪರೀಕ್ಷೆಗಳು ಅಬಾಧಿತವಾಗಿ ಮುಂದುವರಿಯಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಾಳೆ ಸಂಜೆ ಸ್ವಗ್ರಾಮ ಯರಗುಪ್ಪಿಯಲ್ಲಿ ಅಂತ್ಯಸಂಸ್ಕಾರ

ಹುಬ್ಬಳ್ಳಿಯ ಜೆಪಿ ನಗರದ ಮದಿನಾ ಕಾಲನಿಯಲ್ಲಿರುವ ಶಿವಳ್ಳಿಯವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಸಂಸದ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ ಅಂತಿಮ ದರ್ಶನ ಪಡೆದು ಕಟುಂಬಸ್ಥರಿಗೆ ಸಾಂತ್ವಾನ ಹೇಳಿದರು.  ಶಿವಳ್ಳಿ ಅಂತಿಮ ದರ್ಶನ ಪಡೆಯಲು ಅಪಾರ ಪ್ರಮಾಣದಲ್ಲಿ ಶಿವಳ್ಳಿಯವರ ಅಭಿಮಾನಿಗಳು ಹಾಗೂ‌ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಅಭಿಮಾನಿಗಳನ್ನು ‌ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ರಾತ್ರಿ 9 ಗಂಟೆವರಗೆ ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಏರ್ಪಡಿಸಲಾಗಿದೆ. 9 ಗಂಟೆಯ ನಂತರ ಕುಂದಗೋಳ ತಾಲೂಕಿನ ಸ್ವಗ್ರಾಮ ಯರಗುಪ್ಪಿಗೆ ಪಾರ್ಥಿವ ಶರೀರ ರವಾನೆ ಆಗಲಿದ್ದು, ನಾಳೆ ಸಂಜೆ ಸ್ವಗ್ರಾಮ ಯರಗುಪ್ಪಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

 


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv