ಈಶ್ವರಪ್ಪ ಒಂದು ರೀತಿ ಬುಡುಬುಡುಕೆ ಇದ್ದ ಹಾಗೆ: ಹೆಚ್.ಡಿ.ರೇವಣ್ಣ

ಹಾಸನ: ಬಿಜೆಪಿ ಅಧಿಕಾರ ಇದ್ದಾಗ ಹಾಸನ ಜಿಲ್ಲೆಗೆ ಬಿಜೆಪಿ ಕೊಡುಗೆ ಏನು? ಆದರೂ ಯಾವ ಮುಖ ಹೊತ್ತು ಮತ ಕೇಳುತ್ತಾರೋ ಗೊತ್ತಿಲ್ಲ. ಸಮ್ಮಿಶ್ರ ಸರ್ಕಾರ ಹಾಸನಕ್ಕೆ ಹಲವು ಯೋಜನೆ ಕೊಟ್ರೆ, ಇದು ಹಾಸನ ಬಜೆಟ್ ಅಂತಾರೆ ಎಂದು ಸಚಿವ ಹೆಚ್.ಡಿ.ರೇವಣ್ಣ ಕಿಡಿಕಾರಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್.ಡಿ.ರೇವಣ್ಣ, ದೇವೇಗೌಡರು ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಹೀಗಾಗಿ 8 ವಿಧಾನಸಭಾ ಕ್ಷೇತ್ರಗಳ ಜನರು ಪ್ರಜ್ವಲ್ ರೇವಣ್ಣರನ್ನ ಗೆಲ್ಲಿಸೋ ತೀರ್ಮಾನ ಮಾಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿಂಬೆಹಣ್ಣು ಸಹಿತ ರೇವಣ್ಣನನ್ನೇ ನುಂಗುತ್ತೇನೆ ಎಂಬ ಕೆ.ಎಸ್​​. ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಹೆಚ್.ಡಿ.ರೇವಣ್ಣ, ಈಶ್ವರಪ್ಪ ನಂಥವರನ್ನು ನಮ್ಮೂರಿನ ಶಿವನೇ ನುಂಗುತ್ತಾನೆ. ಈಶ್ವರಪ್ಪ ಅವನು ಏನು ಅಂತಾ ಎಲ್ಲರಿಗೂ ಗೊತ್ತಿದೆ ಎಂದು ಏಕವಚನದಲ್ಲೇ‌ ತಿರುಗೇಟು ನೀಡಿದರು. ಅವನು ಒಂದು ರೀತಿ ಬುಡುಬುಡುಕೆ ಇದ್ದ ಹಾಗೆ ಎಂದು‌ ಲೇವಡಿ ಮಾಡಿದರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv