ಗೃಹ ಸಚಿವ ಎಂ.ಬಿ ಪಾಟೀಲ್ ಮತದಾನ

ವಿಜಯಪುರ: ಗೃಹ ಸಚಿವ ಎಂ.ಬಿ ಪಾಟೀಲ್ ಮತ ಚಲಾವಣೆ ಮಾಡಿದರು. ಶ್ರೀ ಸಿದ್ದೇಶ್ವರ ಕಲಾ ಮಂದಿರದ ಮತಗಟ್ಟೆಗೆ ಬೆಂಬಲಿಗರೊಂದಿಗೆ ಆಗಮಿಸಿದ ಗೃಹ ಸಚಿವ ಎಂ.ಬಿ ಪಾಟೀಲ್, ಮತಗಟ್ಟೆ ಸಂಖ್ಯೆ 37 ರಲ್ಲಿ ತಮ್ಮ ಮತ ಚಲಾವಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಫೆಸ್ಟಿವಲ್ ಆಫ್ ಡೆಮಾಕ್ರಸಿ. ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಯಾರು ಯಾವ ಪಕ್ಷಕ್ಕಾದರೂ ಮತ ಚಲಾಯಿಸಬಹುದು ಎಂದರು. ಇದೇ ವೇಳೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ರಾಜೀನಾಮೆ ವಿಷಯ ನನಗೆ ಗೊತ್ತಿಲ್ಲ. ಮಹೇಶ್ ಕುಮಟಳ್ಳಿ, ಜಾರಕಿಹೊಳಿ ಸಹೋದರರು ನನ್ನ ಸ್ನೇಹಿತರು. ಅವರ ಬಗ್ಗೆ ನಮ್ಮ ಪಕ್ಷದ ಹಿರಿಯರು ಹಾಗು ಮುಖಂಡರು ಚರ್ಚೆ ಮಾಡ್ತಾರೆ ಎಂದು ಎಂ.ಬಿ ಪಾಟೀಲ್ ಹೇಳಿದರು.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv